alex Certify BIG NEWS: ರಾಜ್ಯದಲ್ಲಿರುವುದು ಭ್ರಷ್ಟ ಸರ್ಕಾರ; ಬೊಮ್ಮಾಯಿ ಸಿಎಂ ಆದ ಮಾತ್ರಕ್ಕೆ ಬದಲಾವಣೆಯಾಗಲ್ಲ ಎಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿರುವುದು ಭ್ರಷ್ಟ ಸರ್ಕಾರ; ಬೊಮ್ಮಾಯಿ ಸಿಎಂ ಆದ ಮಾತ್ರಕ್ಕೆ ಬದಲಾವಣೆಯಾಗಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯೇ ಭ್ರಷ್ಟ ಪಕ್ಷ. ರಾಜ್ಯದಲ್ಲಿರುವುದು ಭ್ರಷ್ಟ ಸರ್ಕಾರ ಕೇವಲ ಸಿಎಂ ಬದಲಾದ ಮಾತ್ರಕ್ಕೆ ಭ್ರಷ್ಟಾಚಾರ ಬದಲಾಗುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಭ್ರಷ್ಟ ಸಿಎಂ ಆಗಿದ್ದ ಯಡಿಯೂರಪ್ಪನವರನ್ನು ಕೆಳಗಿಳಿಸಿ, ಬೊಮ್ಮಾಯಿ ಅವರನ್ನು ಸಿಎಂ ಮಾಡಿದ ಮಾತ್ರಕ್ಕೆ ಬದಲಾವಣೆಯಾಗಲ್ಲ. ಭ್ರಷ್ಟ ಬಿಜೆಪಿ ಸರ್ಕಾರವನ್ನೆ ತೆಗೆದು ಹಾಕಬೇಕಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

18 ವರ್ಷ ವಯಸ್ಸಿನಲ್ಲಿ ಮಕ್ಕಳ ಕೈಗೆ 20 ಲಕ್ಷ ಬರಬೇಕೆಂದ್ರೆ ದಿನಕ್ಕೆ ಉಳಿಸಿ 200 ರೂ.

ಪದ್ಮನಾಭನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಮತದಾರರು ಸೋಲಿಸಿದಿರಿ. 6 ಬಾರಿ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಿದ್ದೀರಿ? ಕಾಂಗ್ರೆಸ್ ಸೋಲಿಸಲು ಕಾರಣವೇನು? ನಾನು ಅಕ್ಕಿ, ಹಾಲು ಕೊಟ್ಟಿದಕ್ಕೆ ನನಗೆ ಈ ಶಿಕ್ಷೆಯೇ ಎಂದು ಮತದಾರರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಚುನಾವಣೆಗೆ ಸಿದ್ಧವಿದೆ. ಸಮರ್ಥ ಅಭ್ಯರ್ಥಿಗಳನ್ನೂ ಕಣಕ್ಕಿಳಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...