ಆಡಳಿತರೂಢ ಬಿಜೆಪಿ ತನ್ನ 189 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಹಲವು ಕ್ಷೇತ್ರಗಳಲ್ಲಿ ಭಿನ್ನಮತ ಭುಗಿಲೇಳುತ್ತಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ರಾಜೀನಾಮೆ ನೀಡುವುದಾಗಿ ಹೇಳಿದ್ದರೆ, ಮತ್ತೆ ಕೆಲವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.
ಇದರ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಇಂದಿನಿಂದ ಹೊಸ ಗಾಳಿ ಬೀಸುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಹೆಸರುಗಳು ಬರಲಿವೆ ಎಂದು ಹೇಳುವ ಮೂಲಕ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.
ಹೀಗಾಗಿ ಬಿಜೆಪಿ ಟಿಕೆಟ್ ವಂಚಿತರಾದ ಹಲವರು ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲಿದ್ದಾರಾ ಎಂಬ ಕುತೂಹಲ ಈಗ ಎಲ್ಲರಲ್ಲೂ ಮನೆ ಮಾಡಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಈ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ ಇದೆ.