ಬೆಂಗಳೂರು: ಉರಿಬಿಸಿಲ ನಡುವೆಯೇ ರಾಜ್ಯಕ್ಕೆ ವರುಣನ ಸಿಂಚನವಾಗಲಿದ್ದು, ಇಂದು ಹಾಗೂ ನಾಳೆ ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು, ನಾಳೆ ಮಳೆಯಾಗಲಿದೆ ಎಂದು ತಿಳಿಸಿದೆ.
ಇಂದು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
SHOCKING NEWS: ನನಗೆ ಶಿಕ್ಷಕರು ಹೊಡೆಯುತ್ತಾರೆ ಅವರನ್ನು ಅರೆಸ್ಟ್ ಮಾಡಿ; ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ಕ್ಲಾಸ್ ಬಾಲಕ
ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾಗಿ ವಾಯುಭಾರ ಕುಸಿತವುಂಟಾಗಿದ್ದು, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ. ಈಗಾಗಲೇ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.