alex Certify BIG NEWS: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ; ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಹೆಬ್ಬಾಳೆ ಸೇತುವೆ ಜಲಾವೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ; ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಹೆಬ್ಬಾಳೆ ಸೇತುವೆ ಜಲಾವೃತ

ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ ಜಿಲ್ಲೆಗಳು ಮಳೆ ಅವಾಂತರದಿಂದಾಗಿ ತತ್ತರಗೊಂಡಿವೆ.

ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಕಳಸ ಬಳಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಬಾಗಮಂಡಲ-ನಾಪೋಕ್ಲು ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ.

ಹಾವೇರಿಯಲ್ಲಿ ಸತತ ಮಳೆಯಿಂದಾಗಿ ರೈತರ ಜಮೀನು ಜಲಾವೃತಗೊಂಡಿದ್ದು, ಬೆಳೆಗಳು ನಾಶವಾಗಿವೆ. ದಾವಣಗೆರೆಯಲ್ಲಿ ಮಳೆಯಿಲ್ಲದೇ ಕಂಗಾಲಾಗಿದ್ದ ರೈತರು ಈಗಲಾದರೂ ಮಳೆ ಆರಂಭವಾಯಿತಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...