ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಈ ವರ್ಷದಿಂದಲೇ ಇವುಗಳು ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಇಂದಿನಿಂದ ಅತ್ಯಾಧುನಿಕ ಸೌಲಭ್ಯ ಹೊಂದಿರುವ ವಿಸ್ಟಾಡೋಮ್ ರೈಲು ಸಂಚಾರ
ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಈ ಮೆಡಿಕಲ್ ಕಾಲೇಜುಗಳು ಆರಂಭವಾಗುತ್ತಿದ್ದು, ದಾವಣಗೆರೆ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದರು.
ಪ್ರೈವೇಟ್ ಪಾರ್ಟ್ನರ್ ಶಿಪ್ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿದ್ದು, ರಾಜ್ಯ ಸರ್ಕಾರ ಬಂಡವಾಳ ಹೂಡಿಕೆ ಮಾಡಲು ಬಯಸುವವರಿಗೆ ಭೂಮಿಯನ್ನು ನೀಡಲಿದೆ ಎಂದು ಸಚಿವರು ಮಾಹಿತಿ ನೀಡಿದರು.