ಬೆಂಗಳೂರು: ಜೈನಮುನಿ ಹತ್ಯೆ, ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅಧಿವೇಶನದಲ್ಲಿ ಧರಣಿಗೆ ಮುಂದಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಂದಿಪರ್ವತ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಾಗೂ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸ್ತ್ರವನ್ನಾಗಿ ಬಳಸಲು ಮುಂದಾಗಿರುವ ರಾಜ್ಯ ಬಿಜೆಪಿ ಇಂದಿನಿಂದ ಉಭಯ ಸದನಗಳಲ್ಲಿ ದರಣಿ ನಡೆಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರಿಗೆ ರಕ್ಷಣೆ ಇಲ್ಲದಂತಾಗಿದೆ ಎಂಬ ವಿಚಾರ ಇಟ್ಟುಕೊಂಡು ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಸದಸ್ಯರು ಸಿದ್ಧತೆ ನಡೆಸಿದ್ದಾರೆ.