ಕಾರವಾರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಕೋವಿಡ್ ನಿಯಂತ್ರಣ ಮಾಡಲು ಮುಂದಾಗುವ ಬದಲು ಸಿಎಂ ಬೊಮ್ಮಾಯಿ ಸಚಿವ ಸಂಪುಟ ರಚನೆಗೆ ದೆಹಲಿಗೆ ತೆರಳಿದ್ದಾರೆ. ಶಾಸಕರು ಕ್ಷೇತ್ರಗಳನ್ನು ಬಿಟ್ಟು ಮಂತ್ರಿ ಸ್ಥಾನಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾರವಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೋವಿಡ್ ಕೇಸ್ ದಿನೇ ದಿನೇ ಹೆಚ್ಚುತ್ತಿದೆ. ನಮ್ಮ ರಾಜ್ಯದಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಅಂದರೆ ನಮ್ಮ ರಾಜ್ಯದಲ್ಲಿಯೂ ಕೊರೊನಾ 3ನೇ ಅಲೆ ಶುರುವಾಗಿದೆ ಎಂದರ್ಥ. ಇಂತ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗೃತೆ ಕೈಗೊಳ್ಳುವುದನ್ನು ಬಿಟ್ಟು ಸಂಪುಟ ರಚನೆಯತ್ತ ಗಮನ ಹರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಇಂಡೇನ್ ಸಿಲಿಂಡರ್ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಸುದ್ದಿ: ಈ ಸರಳ ವಿಧಾನದ ಮೂಲಕ ಬುಕ್ ಮಾಡಿ ಗ್ಯಾಸ್
ಆಕ್ಸಿಜನ್, ಬೆಡ್, ಚಿಕಿತ್ಸಾ ಸಲಕರಣೆಗಳನ್ನು ಆಸ್ಪತ್ರೆಗಳಲ್ಲಿ ಹೆಚ್ಚಿಸಬೇಕು. ಲಸಿಕಾಕರಣ ಸಮರ್ಪಕವಾಗಿ ಮಾಡಬೇಕು. ಕೋವಿಡ್ ಮೂರನೇ ಅಲೆ ತಡೆಗಟ್ಟಲು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.