ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಆಗಸ್ಟ್ 2ರವರೆಗೂ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.
ಭಾರಿ ಮಳೆಯೊಂದಿಗೆ ಬಿರುಗಾಳಿಯೂ ಬೀಸುವ ಸಾಧ್ಯತೆಯಿದ್ದು, ಪ್ರತಿ ಗಂಟೆಗೆ 40-50 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಿದೆ.