ಬೆಂಗಳೂರು: ಕಾಂಗ್ರೆಸ್ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಯಿತು.
ವಿಧಾನಸಭೆಯಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಸ್ಪೀಕರ್ ಅನುಮತಿ ಪಡೆದು ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಕ ಮಂಡಿಸಿದರು. ವಿಪಕ್ಷ ಕಾಂಗ್ರೆಸ್ ಸದಸ್ಯರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ವಿರೋಧದ ನಡುವೆಯೂ ವಿಧೇಯಕ ಅಂಗೀಕಾರಗೊಂಡಿದೆ.
ಗುಜರಾತ್ ಹಾಗೂ ಉತ್ತರ ಪ್ರದೇಶ ಮಾದರಿಯಲ್ಲಿ ವಿಧೇಯಕ ಮಂಡಿಸಲಾಗಿದ್ದು, ಇದರ ಪ್ರಕಾರ ಹಸು, ಕರು, ಎಮ್ಮೆ ಹತ್ಯೆ ನಿಷೇಧವಾಗಿದೆ. ಗೋಹತ್ಯೆ ಮಾಡಿದರೆ 50 ಸಾವಿರದಿಂದ 5 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ. ಅಲ್ಲದೇ 3-5 ವರ್ಷ ಜೈಲು ಶಿಕ್ಷೆಗೆ ಅವಕಾಶವಿದೆ. 13 ವರ್ಷ ಮೇಲ್ಪಟ್ಟ ಎಮ್ಮೆ ವಧಿಸಬಹುದಾಗಿದೆ. ಕೃಷಿ ಹಾಗೂ ಪಶು ಸಂಗೋಪನೆಗೆ ದನಗಳ ಸಾಗಾಟಕ್ಕೆ ಅಧಿಕಾರಿಗಳ ಅನುಮತಿ ಪಡೆದುಕೊಂಡಿರಬೇಕು ಸೇರಿದಂತೆ ಹಲವು ಅಂಶಗಳನ್ನು ಮಸೂದೆ ಒಳಗೊಂಡಿದೆ.