ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ವಿಚಾರವಗಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಹೋರಾಟ ಆರಂಭವಾಗಿದೆ. ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರೆ, ವಿಪಕ್ಷ ಬಿಜೆಪಿ ಕಾಂಗ್ರೆಸ್ ಗೆ ಪ್ರತಿಯಾಗಿ ಧರಣಿ ಆರಂಭಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಆನಂದ್ ರಾವ್ ವೃತ್ತ ಹಾಗೂ ಮೌರ್ಯ ಸರ್ಕಲ್ ಬಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಯಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.
ಬೆಂಗಳೂರು ಮಾತ್ರವಲ್ಲ, ಮಂಗಳೂರು, ಕಲಬುರ್ಗಿ, ಬೆಳಗಾವಿ, ಮೈಸೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ ಆರಂಭವಾಗಿದೆ.