ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದು, ಸಧ್ಯಕ್ಕೆ ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧಾರ ಮಾಡಲಾಗಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಟಫ್ ರೂಲ್ಸ್ ಬಗ್ಗೆ ಸಧ್ಯಕ್ಕೆ ಚಿಂತನೆ ನಡೆದಿಲ್ಲ. ಕೇಂದ್ರದ ವರದಿ ಬಳಿಕ ಈ ಬಗ್ಗೆ ನಿರ್ಧರಿಸಲಾಗುವುದು. ಅಲ್ಲಿಯವರೆಗೂ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು.
ರಕ್ತ ಹೀನತೆಗೆ ಕಾರಣವಾಗ್ತಿದೆ ಇದರ ಕೊರತೆ
ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆ ಇಲ್ಲ. 70 ಲಕ್ಷ ವ್ಯಾಕ್ಸಿನ್ ಸಂಗ್ರಹವಿದೆ. ಜನರು ಮುಂಜಾಗೃತರಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.