alex Certify BIG NEWS: ರಾಜ್ಯದಲ್ಲಿ ತಲೆ ಎತ್ತಲಿದೆ ದಕ್ಷಿಣ ಭಾರತದ ಮೊದಲ ಆಯುಷ್ ವಿಶ್ವವಿದ್ಯಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ತಲೆ ಎತ್ತಲಿದೆ ದಕ್ಷಿಣ ಭಾರತದ ಮೊದಲ ಆಯುಷ್ ವಿಶ್ವವಿದ್ಯಾಲಯ

ಬೆಳಗಾವಿ: ರಾಜ್ಯದಲ್ಲಿ ಆಯುಷ್ ವಿಶ್ವವಿದ್ಯಾಲಯ ಮಸೂದೆ ಅಂಗೀಕಾರವಾಗಿದ್ದು, ಈ ಮೂಲಕ ದಕ್ಷಿಣ ಭಾರತದ ಮೊದಲ ಆಯುಷ್‌ ವಿಶ್ವವಿದ್ಯಾಲಯ ರಾಜ್ಯದಲ್ಲಿ ಸ್ಥಾಪನೆಯಾಗುವ ಕಾಲ ಸನ್ನಿಹಿತವಾಗಿದೆ.

ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಆರಂಭಿಕವಾಗಿ 20 ಕೋಟಿ ರೂಪಾಯಿ ಅನುದಾನ ಮೀಸಲಿಡಲಿದ್ದು, ಇದಕ್ಕಾಗಿ 100 ಎಕರೆ ಜಮೀನು ಮಂಜೂರಾಗಿದೆ. ಈ ವಿಶ್ವವಿದ್ಯಾಲಯ ಶಿವಮೊಗ್ಗ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿ ಸ್ಥಾಪನೆಯಾಗಲಿದೆ.

ಈ ವಿಧೇಯಕಕ್ಕೆ ಕಾಂಗ್ರೆಸ್ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಡಾ. ಯತೀಂದ್ರ ಮಾತನಾಡಿ, ರಾಜ್ಯದಲ್ಲಿ ಸದ್ಯದ ಸ್ಥಿತಿಯಲ್ಲಿ ಆಯುಷ್‌ ನ ಅಗತ್ಯವಿಲ್ಲ. ಸರ್ಕಾರ ಮೊದಲು ಆರೋಗ್ಯ ಇಲಾಖೆಗೆ ಹೆಚ್ಚಿನ ಅನುದಾನ ಮೀಸಲಿಟ್ಟು ಆ ಕ್ಷೇತ್ರದ ಅಭಿವೃದ್ಧಿ ಮಾಡಬೇಕಿದೆ ಎಂದರು.

ಶಾಸಕ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಶಾಸಕರು, ಕೊರೊನಾ ಸಂಕಷ್ಟ ಕಾಲದಲ್ಲಿ ಈ ವಿಶ್ವ ವಿದ್ಯಾಲಯ ಸ್ಥಾಪನೆಯ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...