ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ನಾಳೆಯಿಂದಲೇ ರಾಜ್ಯದಲ್ಲಿ ಖಡಕ್ ನಿಯಮಗಳು ಜಾರಿಗೆ ಬರಲಿರುವ ಸಾಧ್ಯತೆ ಇದೆ.
ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಜನರ ಓಡಾಟ, ವಿದೇಶಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ವೈರಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಮುಂಜಾಗೃತಾ ಕ್ರಮಗಳನ್ನು ಚರ್ಚಿಸುವ ನಿಟ್ಟಿನಲ್ಲಿ ನಾಳೆ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಯಲಿದೆ.
ನಾಳೆ ನಡೆಯಲಿರುವ ಸಭೆಯ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ. ಸಭೆಯಲ್ಲಿ ಹೊಸ ಗೈಡ್ ಲೈನ್ ಹಾಗೂ ಮಾಸ್ಕ್ ರೂಲ್ಸ್ ಬಗ್ಗೆ ನಿರ್ಧಾರಗಳು ಹೊರಬೀಳಲಿವೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್ ಲೈನ್ ಜಾರಿ ಮಾಡುವ ಸಾಧ್ಯತೆ ದಟ್ಟವಾಗಿದೆ.
ನಾಳೆಯಿಂದಲೇ ಮಾಸ್ಕ್ ಕಡ್ದಾಯ ಜಾರಿಯಾಗುವ ಸಾಧ್ಯತೆ ಇದ್ದು, ಮಾಲ್, ಥಿಯೇಟರ್, ಮಾರ್ಕೆಟ್, ಜನದಟ್ಟಣೆ ಪ್ರದೇಶಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ. ಒಟ್ಟಾರೆ ಹೊಸ ವರ್ಷಾಚಣೆಗೆ ಈ ಬಾರಿಯೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬ್ರೇಕ್ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.