ರಾಜ್ಯದಲ್ಲಿ ಕೊಂಚ ಇಳಿಮುಖವಾಗಿದ್ದ ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೆ ಮಲೆನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಉತ್ತರ ಕನ್ನಡದಲ್ಲಿ ಆಗಸ್ಟ್ 1ರಿಂದ 3 ದಿನಗಳ ಕಾಲ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಆಗಸ್ಟ್ 2, 3ರಂದು ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದ್ದು, ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು, ತುಮಕೂರು, ಹಾಸನ, ಮಂಡ್ಯ, ಧಾರವಾಡ, ಗದಗ ಮತ್ತು ಮೈಸೂರು ಜಿಲ್ಲೆಯಲ್ಲಿ ಆಗಸ್ಟ್ 2 ರಿಂದ ಮುಂದಿನ ಎರಡು ದಿನಗಳ ಕಾಲ ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.