ಮೈಸೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ 9 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಸ್ವಿಜರ್ಲ್ಯಾಂಡ್ ನಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೀಲಿಯಂ ಅನಿಲ ಸೇವಿಸಿದ ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ..!
ಸೋಂಕಿತ ಬಾಲಕಿಯ ಪ್ರಾಥಮಿಕ ಹಾಗು ದ್ವಿತೀಯ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.