
ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ಕಾವೇರಿರುವ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯ ಸುಳಿವನ್ನು ಬಿಚ್ಚಿಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಆನಗೋಡಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ರು.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವುದು ಸಿಎಂ ಬೊಮ್ಮಾಯಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಅವರ ತೀರ್ಮಾನವೇ ಅಂತಿಮವಾಗಿದೆ. ಯಾರಿಗೆ ಯಾವ ಖಾತೆ ನೀಡಬೇಕು ಅನ್ನೋದನ್ನೂ ಬಸವರಾಜ ಬೊಮ್ಮಾಯಿಯೇ ನಿರ್ಧರಿಸುತ್ತಾರೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ರು.
ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಯಡಿಯೂರಪ್ಪ ನಾನಂತೂ ಬಹಿರಂಗವಾಗಿಯೇ ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ಎಲ್ಲಿ ನಿಮ್ಮ ಅಭ್ಯರ್ಥಿಗಳು ಇಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಸಹಕಾರ ನೀಡುವಂತೆ ವಿನಂತಿಸಿದ್ದೇನೆ. ಜೆಡಿಎಸ್ ನಮಗೆ ನೂರಕ್ಕೆ ನೂರರಷ್ಟು ಬೆಂಬಲ ನೀಡುತ್ತೆ ಎಂಬ ನಂಬಿಕೆ ಇದೆ ಎಂದು ಹೇಳಿದರು.