alex Certify BIG NEWS: ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಸುಳಿವು ನೀಡಿದ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಸುಳಿವು ನೀಡಿದ BSY

ರಾಜ್ಯದಲ್ಲಿ ವಿಧಾನಪರಿಷತ್​ ಚುನಾವಣೆ ಕಾವೇರಿರುವ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯ ಸುಳಿವನ್ನು ಬಿಚ್ಚಿಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಆನಗೋಡಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ರು.

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವುದು ಸಿಎಂ ಬೊಮ್ಮಾಯಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಅವರ ತೀರ್ಮಾನವೇ ಅಂತಿಮವಾಗಿದೆ. ಯಾರಿಗೆ ಯಾವ ಖಾತೆ ನೀಡಬೇಕು ಅನ್ನೋದನ್ನೂ ಬಸವರಾಜ ಬೊಮ್ಮಾಯಿಯೇ ನಿರ್ಧರಿಸುತ್ತಾರೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ರು.

ಜೆಡಿಎಸ್​ ಜೊತೆಗಿನ ಬಿಜೆಪಿ ಮೈತ್ರಿ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಯಡಿಯೂರಪ್ಪ ನಾನಂತೂ ಬಹಿರಂಗವಾಗಿಯೇ ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ಎಲ್ಲಿ ನಿಮ್ಮ ಅಭ್ಯರ್ಥಿಗಳು ಇಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಸಹಕಾರ ನೀಡುವಂತೆ ವಿನಂತಿಸಿದ್ದೇನೆ. ಜೆಡಿಎಸ್​ ನಮಗೆ ನೂರಕ್ಕೆ ನೂರರಷ್ಟು ಬೆಂಬಲ ನೀಡುತ್ತೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...