alex Certify BIG NEWS: ರಾಜ್ಯದಲ್ಲಿ ಮಳೆ ಕೊರತೆ; ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದ ಡಿಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮಳೆ ಕೊರತೆ; ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದ ಡಿಸಿಎಂ

ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದೆ. ನಮ್ಮವರಿಗೆ ನೀರಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಈ ಬಾರಿ ತಮಿಳುನಾಡಿಗೆ ನೀರು ಪೂರೈಕೆ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬೆಂಗಳೂರಿಗೆ ಸಧ್ಯಕ್ಕೆ ಕುಡಿಯೋ ನೀರು ಸಮಸ್ಯೆ ಆಗದಂತೆ ಆದ್ಯತೆ ನೀಡಲಾಗುವುದು. ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ. ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಕೆಲ ವಿಚಾರ ಚರ್ಚಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಕೊಳಚೆ ನೀರು ಶುದ್ಧೀಕರಣ ವಿಚಾರವಾಗಿ ಭೇಟಿ ಮಾಡಿದ್ದೇನೆ. ಈ ಬಗ್ಗೆ ತಮಿಳುನಾಡು ಸರ್ಕಾರ ಕೋರ್ಟ್ ಗೆ ಹೋಗಿದೆ. ನ್ಯಾಯಾಧಿಕರಣ ರಚನೆಗೆ ಸೂಚನೆ ಬಂದಿದೆ. ಕೊಳಚೆ ನೀರು ಶುದ್ಧೀಕರಿಸಿ ಕೆರೆ ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ಕೋಲಾರ ಸೇರಿದಂತೆ ಹಲವು ಭಾಗಗಳ ಕೆರೆ ತುಂಬಿಸಲಾಗುತ್ತದೆ. ಕೊಳಚೆ ನೀರು ಶುದ್ಧೀಕರಣಕ್ಕೆ ಕೇಂದ್ರ ಸರ್ಕಾರವೂ ಅಭಿನಂದಿಸಿದೆ. ಈ ನಿಟ್ಟಿನಲ್ಲಿ ನ್ಯಾಯಾಧೀಕರಣ ರಚನೆ ಬೇಡ ಎಂದು ನಾವು ಮನವಿ ಮಾಡಿದ್ದೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...