ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚುತಿದ್ದು, ಮಾಸ್ಕ್ ಕಡ್ಡಾಯ ಮಾಡುವ ವಿಚಾರವಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಧ್ಯಕ್ಕೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿಲ್ಲ. ಆದರೆ ಮಾಸ್ಕ್ ಧರಿಸಿ ಎಂದು ಸಲಹೆ ನೀಡಲಾಗಿದೆ. ನಿನ್ನೆ ನಡೆದ ಸಭೆಯಲ್ಲಿ ಮಾಸ್ಕ್ ಧರಿಸುವ ಬಗ್ಗೆ ಸಲಹೆ ಕೊಟ್ಟಿದ್ದೇವೆ. ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯದ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ನಿನ್ನೆ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಮಾಸ್ಕ್ ಧರಿಸಿದ್ದರು. ಮುಂಜಾಗೃತಾ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಹೇಳಿದರು.