alex Certify BIG NEWS: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಶೃಂಗೇರಿ, ಕೊಪ್ಪ ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಬಿಇಓ ರಾಘವೇಂದ್ರ ತಿಳಿಸಿದ್ದಾರೆ. ಮೂಡಿಗೆರೆಯಲ್ಲಿ ಬಿರುಗಾಳಿ ಮಳೆಗೆ ಬೃಹತ್ ಮರಗಳು ಧರಾಶಾಹಿಯಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ, ಕೊಪ್ಪಳ, ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಅದರಲ್ಲಿಯೂ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. ಸೇತುವೆಗಳು ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲೂಕು ಕೇಂದ್ರ, ಖಾನಪುರ ಸೇರಿದಂತೆ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...