ಬೆಂಗಳೂರು: ರಾಜ್ಯದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಪ್ರಯೋಗಾಲಯ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಮೂರು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿದ್ದಾರೆ.
ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಗೃಹ ಸಚಿವರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಅರಗ ಜ್ಞಾನೇಂದ್ರ ಗುಜರಾತ್ ಗೆ ತೆರಳಲಿದ್ದಾರೆ.
ಸಭೆಯಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಸಭೆ ಬಳಿಕ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರನ್ನು ಭೇಟಿಯಾಗಲಿದ್ದಾರೆ.