alex Certify BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು; ಜಿಲ್ಲಾಡಳಿತದ ಜೊತೆ ಸಿಎಂ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು; ಜಿಲ್ಲಾಡಳಿತದ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಕೊರೊನಾ ಹೊಸ ರೂಪಾಂತರ ವೈರಸ್ ಭೀತಿ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಗಳ ಜೊತೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದು, ಬೆಂಗಳೂರು ನಗರ ಸೇರಿದಂತೆ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

BIG BREAKING: SDM ಕಾಲೇಜಿನಲ್ಲಿ ಕೊರೊನಾ ಸ್ಫೋಟ; 281 ಜನರಿಗೆ ಕೋವಿಡ್ ಸೋಂಕು

ಈ ಕುರಿತು ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯದ ಕೆಲವೆಡೆಗಳಲ್ಲಿ ಕೊರೊನಾ ಸೋಕು ಹೆಚ್ಚುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಹಾಗೂ ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಇಂದು 7 ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಬೆಂಗಳೂರು ನಗರ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...