alex Certify BIG NEWS: ರಾಜ್ಯದ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ 24 ಗಂಟೆಗಳ ಬಿಗಿ ಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ತುರ್ತು ಸಭೆ ನಡೆಸಿದ ಸಿಎಂ, ಕಳೆದ ಒಂದು ವಾರದಲ್ಲಿನ ಕೋವಿಡ್ ಪಾಸಿಟಿವಿಟಿ ರೇಟ್ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ರಾಜ್ಯದಲ್ಲಿ ಕೋವಿಡ್ ಟೆಸ್ಟ್, ನಿಯಂತ್ರಣದ ಬಗ್ಗೆ ವಿವರ ಪಡೆದ ಸಿಎಂ ಬೊಮ್ಮಾಯಿ, ಗಡಿಯಲ್ಲಿ ದಿನದ 24 ಗಂಟೆ ಬಿಗಿ ಕ್ರಮಕ್ಕೆ ಸೂಚಿಸಿದರು. ಗಡಿಯಲ್ಲಿ ಸಿಬ್ಬಂದಿ ಶಿಫ್ಟ್ ವೈಸ್ ಪರೀಕ್ಷೆ ನಡೆಸಲು ಹಾಗೂ ಕೋವಿಡ್ ಲಸಿಕೆ ಪಡೆದ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದರು.

ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...