alex Certify BIG NEWS: ರಾಜ್ಯದ 3 ಜಿಲ್ಲೆಗಳಲ್ಲಿ ಏಕಕಾಲಕ್ಕೆ NIA ದಾಳಿ; ಮೂವರು ಶಂಕಿತ ಉಗ್ರರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ 3 ಜಿಲ್ಲೆಗಳಲ್ಲಿ ಏಕಕಾಲಕ್ಕೆ NIA ದಾಳಿ; ಮೂವರು ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ-NIA ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತುಮಕೂರು ಹಾಗೂ ಬೆಳಗಾವಿಯಲ್ಲಿ ದಾಳಿ ನಡೆಸಿರುವ ಎನ್ ಐ ಎ ಅಧಿಕಾರಿಗಳು ತಲಾ ಒಬ್ಬರಂತೆ ಮೂರು ಶಂಕಿತ ಉಗ್ರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇಂದು ಬೆಳಗಿನ ಜಾವ ಏಕಕಾಲದಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ.

ಎನ್ ಐ ಎ ಹಾಗೂ ರಾಜ್ಯ ಗುಪ್ತದಳ ಅಧಿಕಾರಿಗಳಿಂದ ಈ ಕಾರ್ಯಾಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಭಟ್ಕಳದಲ್ಲಿ ಅಬ್ದುಲ್ ಮುಕ್ತದೀರ್ ಎಂಬ ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನಿಬ್ಬರ ಹೆಸರು ಖಚಿತವಾಗಿ ತಿಳಿದುಬಂದಿಲ್ಲ. ಆದರೆ ಮೂವರು ಶಂಕಿತರು ಐಸಿಸ್ ಜತೆ ಸಂಪರ್ಕ ಹೊಂದಿದ್ದರು ಎಂಬ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...