ಬೆಂಗಳೂರು: ಕರ್ನಾಟಕ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿರುಸಿನ ಮತದಾನ ಆರಂಭವಾಗಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಈ ನಡುವೆ ರಾಜ್ಯಸಭೆಗೆ ಬಿಜೆಪಿಯಿಂದ ಕಣಕ್ಕಿಳಿದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. 46 ಬಿಜೆಪಿ ಶಾಸಕರು ನಿಗದಿಯಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ಚಲಾಯಿಸಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್ ಗೆಲುವು ಖಚಿತವಾಗಿದೆ.
ಅಧಿಕೃತ ಘೋಷಣೆ ಸಂಜೆ ವೇಳೆ ಹೊರಬೀಳಲಿದೆ. ಬಿಜೆಪಿಯ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಫಲಿತಾಂಶದವರೆಗೂ ಕಾಯುವ ಅಗತ್ಯವಿಲ್ಲ, ಯಾವುದೇ ಅನುಮಾನವೂ ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.