alex Certify BIG NEWS: ರಾಜ್ಯಸಭಾ ಚುನಾವಣೆ; ಮತದಾನ ಅಂತ್ಯ; ಯಾರ ಪಾಲಾಗಲಿದೆ 4ನೇ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭಾ ಚುನಾವಣೆ; ಮತದಾನ ಅಂತ್ಯ; ಯಾರ ಪಾಲಾಗಲಿದೆ 4ನೇ ಸ್ಥಾನ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು 224 ಶಾಸಕರು ಮತ ಚಲಾಯಿಸಿದ್ದಾರೆ. ಜೆಡಿಎಸ್ ನ ಓರ್ವ ಶಾಸಕರಿಂದ ಅಡ್ಡ ಮತದಾನವಾಗಿದೆ. ಮತದಾನ ಪ್ರಕ್ರಿಯೆ ಅಂತ್ಯಕ್ಕೆ ಎರಡು ತಾಸು ಬಾಕಿ ಇರುವಾಗಲೇ ವೋಟಿಂಗ್ ಅಂತ್ಯಗೊಂಡಿದ್ದು ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಒಟ್ಟು 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಕಣದಲಿದ್ದು, ಮೂರು ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ನಿಂದ ಜೈರಾಮ್ ರಮೇಶ್, ಮನ್ಸೂರ್ ಅಲಿಖಾನ್ ಹಾಗೂ ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದು, ನಾಲ್ಕನೇ ಸ್ಥಾನ ಕಾಂಗ್ರೆಸ್ ಪಾಲಾಗಲಿದೆಯೇ ಅಥವಾ ಜೆಡಿಎಸ್ ಗೆ ಒಲಿಯಲಿದೆಯೇ ಎಂಬುದೇ ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...