alex Certify BIG NEWS: ರಾಜ್ಯಸಭಾ ಚುನಾವಣೆ; ಮೂರು ಅಭ್ಯರ್ಥಿಗಳ ಗೆಲುವಿಗಾಗಿ ರಣತಂತ್ರ ಹೆಣೆಯಲು BJP ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭಾ ಚುನಾವಣೆ; ಮೂರು ಅಭ್ಯರ್ಥಿಗಳ ಗೆಲುವಿಗಾಗಿ ರಣತಂತ್ರ ಹೆಣೆಯಲು BJP ಮಹತ್ವದ ಸಭೆ

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಮಹತ್ವದ ಸಭೆ ನಡೆದಿದ್ದು, ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಯಾವ ರೀತಿ ಪ್ಲಾನ್ ಮಾಡಬೇಕು ಎಂಬ ಕುರಿತು ಚರ್ಚೆ ನಡೆದಿದೆ.

ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಆರ್.ಅಶೋಕ್, ಲೆಹರ್ ಸಿಂಗ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ರಾಜ್ಯಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಹಾಗೂ ಲೆಹರ್ ಸಿಂಗ್ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸುವ ಕುರಿತು ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆದಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...