ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಅಭ್ಯರ್ಥಿಗಳ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತನಾಡಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಈಗ ನಮ್ಮ ಬಳಿ 32 ಮತಗಳಿವೆ. ಎರಡು ರಾಷ್ಟ್ರೀಯ ಪಕ್ಷಗಳಿವೆ. ಒಂದು ಕೋಮುವಾದಿ ಪಕ್ಷ. ಮತ್ತೊಂದು ಕೋಮುವಾದ ವಿರುದ್ಧವಾದ ಪಕ್ಷ. ನಾವು ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದೇವೆ. ನಮ್ಮ ಅಭ್ಯರ್ಥಿ ಬೆಂಬಲಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಚರ್ಚೆ ನಡೆಸಲಾಗಿದೆ ಎಂದರು.
Shocking: ಕರ್ನಾಟಕದಲ್ಲಿ ಗುಟ್ಕಾ ಜಗಿಯುವವರ ಸಂಖ್ಯೆಯಲ್ಲಿ ಹೆಚ್ಚಳ….!
ಇತ್ತ ಕುಪೇಂದ್ರ ರೆಡ್ಡಿ ಕೂಡ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಭೇಟಿಗೂ ಅವಕಾಶ ಕೆಳಿದ್ದೇವೆ. ರಾಮಲಿಂಗಾ ರೆಡ್ಡಿ ಭೇಟಿಯಾಗಿ ಮಾತನಾಡಿದ್ದೇವೆ. ಆದರೆ ನಿನ್ನೆ ಕಾಂಗ್ರೆಸ್ ಎರಡನೇ ಅಭ್ಯರ್ಥಿಯನ್ನು ಹಾಕಿದೆ. ಕೋಮುವಾದವನ್ನು ದೂರವಿಡಲು ಪ್ರಾದೇಶಿಕ ಪಕ್ಷ ಬೆಂಬಲಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.