ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಟ ಜಗ್ಗೇಶ್ ಜುಲೈ 8ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಜಗ್ಗೇಶ್ ಅವರ ಪ್ರಮಾಣವಚನ ಕ್ರಮಬದ್ಧವಾಗಿರಲಿಲ್ಲವೆಂದು ಹೇಳಲಾಗಿದ್ದು, ಹೀಗಾಗಿ ಅವರು ಸೋಮವಾರದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು, ಜಗ್ಗೇಶ್ ಅವರ ಪ್ರಮಾಣವಚನ ಕ್ರಮಬದ್ಧವಾಗಿದೆಯೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ಎನ್ನಲಾಗಿದ್ದು, ಅವರು ಪರಿಶೀಲನೆ ಬಳಿಕ ಇದು ಕ್ರಮಬದ್ಧವಾಗಿರಲಿಲ್ಲವೆಂದು ತಿಳಿಸಿದ್ದರು ಎಂದು ತಿಳಿದು ಬಂದಿದೆ.
ಹೀಗಾಗಿ ಜಗ್ಗೇಶ್ ಅವರು ಸೋಮವಾರದಂದು ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೊದಲು ಅವರು ಶ್ರೀ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.