ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿ 9 ದಿನಗಳು ಕಳೆಯುತ್ತಿದ್ದರು ವಿಪಕ್ಷ ಸದಸ್ಯರು ಸುಗಮ ಕಲಾಪಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದೀಗ ರಾಜ್ಯಸಭೆ ಕಲಾಪದಿಂದ ಮತ್ತೆ ಮೂರು ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಎರಡು ದಿನಗಳ ಹಿಂದಷ್ಟೇ ರಾಜ್ಯಸಭೆಯ 19 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಅಮಾನತುಗೊಂಡ ಸಂಸದರು ಸಂಸತ್ ಭವನದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದೀಗ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಆಮ್ ಆದ್ಮಿ ಪಕ್ಷದ ಸುಶೀಲ್ ಕುಮಾರ್ ಗುಪ್ತಾ, ಸಂದೀಪ್ ಕುಮಾರ್ ಪಾಠಕ್ ಹಾಗೂ ಪಕ್ಷೇತರ ಸಂಸದ ಅಜಿತ್ ಕುಮಾರ್ ಭುಯಾನ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸಂಸದ ಅಮಾನತು ಬೆನ್ನಲ್ಲೇ ರಾಜ್ಯಸಭೆಯಲ್ಲಿ ಗದ್ದಲ-ಕೋಲಾಹಲ ತೀವ್ರಗೊಂಡಿದ್ದು, ಕಲಾಪವನ್ನು 2 ಗಂಟೆವರೆಗೆ ಮುಂದೂಡಲಾಗಿದೆ.