ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕರ ಮಳೆಗೆ ಈಗಗಾಲೇ ಕರಾವಳಿ ಜಿಲ್ಲೆಗಳು ತತ್ತರಿಸಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಇಂದಿನಿಂದ ರಾಜ್ಯಾದ್ಯಂತ ಜುಲೈ 21ರವರೆಗೆ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ಹಾಗೂ 21ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಪ್ರೇಮ್ ನಿರ್ದೇಶನದ ಸಿನಿಮಾ ಮ್ಯೂಸಿಕ್ ಡೈರೆಕ್ಟರ್ ಮೇಲೆ ದುಷ್ಕರ್ಮಿಗಳ ದಾಳಿ
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಜುಲೈ 20 ಹಾಗೂ 21ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಧಾರವಾಡ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ಮೈಸೂರು ಜಿಲ್ಲೆಗಳಲ್ಲಿ ನಾಳೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ನದಿ ಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.