ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮಳೆ ಅವಾಂತರದಿಂದ ಸಿಲಿಕಾನ್ ಸಿಟಿ ಜನರು ತತ್ತರಗೊಂಡಿದ್ದಾರೆ. ಈ ನಡುವೆ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆಗಳಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.