alex Certify BIG NEWS: ರಾಜ್ಯಾದ್ಯಂತ ಇನ್ನೂ 5 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಾದ್ಯಂತ ಇನ್ನೂ 5 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮಳೆ ಅವಾಂತರದಿಂದ ಸಿಲಿಕಾನ್ ಸಿಟಿ ಜನರು ತತ್ತರಗೊಂಡಿದ್ದಾರೆ. ಈ ನಡುವೆ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆಗಳಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.

ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...