alex Certify BIG NEWS: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ.

ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯನಗರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿಯು ಭಾರಿ ಮಳೆಯಾಗಲಿದೆ.

ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...