ಬೆಂಗಳೂರು: ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಲಕ್ಷ ದ್ವೀಪಗಳಲ್ಲಿ ಐದು ದಿನಗಳವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳವರೆಗೆ ವ್ಯಾಪಕ ಮಳೆಯಾಗಲಿದೆ.
ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮಂಗಳವಾರದವೆಗೆ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟಪ್ಪಣೆ ಮಾಡಲಾಗಿದೆ.