ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಕುಮಾರಸ್ವಾಮಿ ವಿರುದ್ಧ ಅಂಬರೀಶ್ ಅಭಿಮಾನಿಗಳು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ.
ಕುಮಾರಸ್ವಾಮಿ ಹಾಗೂ ಸುಮಲತಾ ಗಣಿ ಜಗಳ ಇದೀಗ ಮತ್ತೊಂದು ಸ್ವರೂಪ ಪಡೆದುಕೊಂಡಿದ್ದು, ಅಕ್ರಮ ಗಣಿಗಾರಿಕೆ ನಡೆದಿದ್ದು ಅಂಬರೀಶ್ ಕಾಲದಲ್ಲಿ ಎಂಬ ಜೆಡಿಎಸ್ ಶಾಸಕ ರವೀಂದ್ರಶ್ರೀಕಂಠಯ್ಯ ಆರೋಪದ ಬೆನ್ನಲ್ಲೇ ಇದೀಗ ಅಂಬರೀಶ್ ಅಭಿಮಾನಿಗಳು ಹೋರಾಟಕ್ಕೆ ನಿರ್ಧರಿಸಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ, ರವೀಂದ್ರ ಶ್ರೀಕಂಠಯ್ಯಗೆ ಘೇರಾವ್ ಹಾಕಲು ನಿರ್ಧರಿಸಿದ್ದಾರೆ.
ನಟಿ ತೇಜಸ್ವಿನಿ ಪ್ರಕಾಶ್ ಲೇಟೆಸ್ಟ್ ಫೋಟೋ ಶೂಟ್
ಅಂಬರೀಶ್ ಹಾಗೂ ಸುಮಲತಾ ಬಗ್ಗೆ ಹಗುರವಾಗಿ ಮಾತನಾಡುತ್ತಿರುವ ಜೆಡಿಎಸ್ ನಾಯಕರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಲು ಅಂಬರೀಶ್ ಅಭಿಮಾನಿಗಳ ಸಂಘದ ಸಭೆಯಲ್ಲಿ ತೀರ್ಮಾನಿಸಲಾಗಿದೆ.