ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಬದಲಾವಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಪ್ರಮುಖವಾಗಿ ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಹೈಕಮಾಂಡ್ ಸುರ್ಜೇವಾಲಾರನ್ನು ಕೇಂದ್ರದಲ್ಲಿ ತೊಡಗಿಸುವ ಪ್ಲಾನ್ ಮಾಡಿದೆ. ಅಲ್ಲದೇ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ, ಗೋವಾ ಚುನಾವಣೆಗೂ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿಯನ್ನು ಬದಲಾವಣೆ ಮಾಡಿ ಅವರನ್ನು ಕೇಂದ್ರದತ್ತ ಕರೆಸಿಕೊಳ್ಳಲು ಮುಂದಾಗಿದ್ದಾರೆ.
BIG NEWS: ಅರ್ಚಕರ ಮೇಲೆ ಮಾರಣಾಂತಿಕ ಹಲ್ಲೆ; ಮಚ್ಚು, ಲಾಂಗ್ ನಿಂದ ದಾಳಿ ನಡೆಸಿದ ದುಷ್ಕರ್ಮಿಗಳು
ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನೂತನ ಉಸ್ತುವಾರಿ ನೇಮಕವಾಗುವ ಸಾಧ್ಯತೆ ಇದ್ದು, ರಮೇಶ್ ಚನ್ನಿತಾಲ್ ರನ್ನು ಉಸ್ತುವಾರಿಯಾಗಿ ನೇಮಕ ಮಾಡುವ ನಿರೀಕ್ಷೆಯಿದೆ. ಚನ್ನಿತಾಲ್ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಬಲಪಡಿಸಿ 2023ರ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ನಿರ್ಧರಿಸಿದೆ.