alex Certify BIG NEWS: ರಾಜ್ಯ ಕಾಂಗ್ರೆಸ್ ಗೆ ಮೇಜರ್ ಸರ್ಜರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಕಾಂಗ್ರೆಸ್ ಗೆ ಮೇಜರ್ ಸರ್ಜರಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಲ ಮಹತ್ವದ ಬದಲಾವಣೆಗೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜಿಲ್ಲಾ ಘಟಕದ ಮಟ್ಟದಲ್ಲಿ ಉತ್ಸಾಹಿ ಯುವಕರಿಗೆ ಮಣೆ ಹಾಕಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಲವು ಬದಲಾವಣೆಗಳನ್ನು ತರಲು ನಿರ್ಧಾರ ಕೈಗೊಂಡಿದ್ದಾರೆ. ಇಂದು ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ ಮಾಡಿದ್ದು, ಜಿಲ್ಲಾಧ್ಯಕ್ಷರ ಬದಲಾವಣೆಗೆ ನಿರ್ಧರಿಸಿದ್ದಾರೆ.

ಸಕ್ರಿಯ ರಾಜಕಾರಣದಿಂದ ಆಧ್ಯಾತ್ಮಿಕ ಲೋಕಕ್ಕೆ ವಾಲಿದ ನಿವೃತ್ತ ಡಿಜಿಪಿ..!

ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಎರಡು ಅವಧಿ ಮುಗಿದ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಲಾಗುವುದು. ಈ ಬಗ್ಗೆ ನಾವು ಜಿಲ್ಲಾ ಮಟ್ಟದಲ್ಲಿ 1 ವಾರದಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಅಧ್ಯಕ್ಷರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಪಕ್ಷಕ್ಕೆ ಹೊಸಬರು ಬರಬೇಕು, ಹಳಬರು ಇರಬೇಕು ಈ ನಿಟ್ಟಿನಲ್ಲಿ ಉತ್ಸಾಹಿಗಳಿಗೆ ಸ್ಥಾನ ನೀಡಲು ನಿರ್ಧರಿಸಲಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...