ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ಬಗ್ಗೆಯಾಗಲಿ, ಸಿಎಂ ಅಭ್ಯರ್ಥಿ ಬಗ್ಗೆಯಾಗಲಿ ರಾಜ್ಯ ನಾಯಕರು ಯಾವುದೇ ರೀತಿ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಖಡಕ್ ಸೂಚನೆ ನೀಡಿದ್ದಾರೆ.
ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾಗಲಿದೆ ʼಮಾರುತಿʼ ಬೆಲೆ
ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮಾರಕವಾಗಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವದ ಚರ್ಚೆ ಬೇಡ. ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ಉದ್ದೇಶವಾಗಿರಬೇಕು. ಆ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೆಕು ಹೊರತು ಸಿಎಂ ಅಭ್ಯರ್ಥಿ ಬಗ್ಗೆ ಮಾತನಾಡಬಾರದು. ಮುಂದೆ ಸಿಎಂ ಯಾರಾಗಬೇಕು ಎಂಬುದನ್ನು ಎಲ್ಲಾ ಶಾಸಕರು ಹಾಗೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಇದು ಸಿಎಂ ಸ್ಥಾನದ ಬಗ್ಗೆ ಮಾತನಾಡುವ ಸಮಯವಲ್ಲ; ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆಯೂ ಇಲ್ಲ; ಡಿಕೆಶಿ ಸಮಜಾಯಿಷಿ
ಇದೇ ವೇಳೆ ಜೂನ್ 24ರಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದು, ರಾಜ್ಯ ಉಸ್ತುವಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.