ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದ್ದು, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೀಪಾವಳಿ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ.
ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ವಿಚಾರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಮತ್ತೆ ಚಿಗುರೊಡೆದಿದ್ದು, ಲಾಭಿ ಆರಂಭವಾಗಿದೆ.