ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ನಿರತವಾಗಿರುವ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಶುರುವಾಗಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ನೀಡಿದೆ.
ಪಾಲಿಕೆ ವ್ಯಾಪ್ತಿಯಲ್ಲಿನ ಕಾಮಗಾರಿಯ ಬಿಲ್ 650 ಕೋಟಿ ಬಿಡುಗಡೆ ಮಾಡದೇ ಹೋದರೆ ಬೆಂಗಳೂರಿನ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಗುತ್ತಿಗೆದರರ ಸಂಘ ವಾರ್ನಿಂಗ್ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯ ಕಸ ವಿಲೇವಾರಿ, ರಸ್ತೆ ಕಾಮಗಾರಿ ಸೇರಿದಂತೆ ಚಾಲ್ತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.