ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಪ್ರಮುಖವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗಾಗಿಯೇ ವಿಶೇಷ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ವಿಮಾನ, ರೈಲು, ರಸ್ತೆ ಮಾರ್ಗವಾಗಿ ರಾಜ್ಯಕ್ಕೆ ಬರುವ ಪ್ರಯಾಣಿಕರು ಕೋವಿಡ್ ಲಸಿಕೆ ಪಡೆಯಲಿ, ಪಡೆಯದಿರಲಿ 72 ಗಂಟೆಗಳ ಒಳಗೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು.
ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಬೆಳಗಾವಿ, ವಿಜಯಪುರ, ಕಲಬುರ್ಗಿ, ಬೀದರ್ ಮೂಲಕ ರಾಜ್ಯಕ್ಕೆ ಬರುವ ವಾಹನಗಳ ಮೇಲೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಹಾಗೂ ತೀವ್ರ ನಿಗಾ ಇಡಲು ಸೂಚಿಸಲಾಗಿದೆ.
BIG NEWS: ಕ್ಯಾಬಿನೆಟ್ ರಚನೆಗೆ ಮುಹೂರ್ತ ಫಿಕ್ಸ್…? ಗುರುವಾರ ನೂತನ ಸಚಿವರ ಪ್ರಮಾಣ ವಚನ….?
ಕೇರಳ, ಮಹಾರಾಷ್ಟ್ರದಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ದೈನಂದಿನ ಭೇಟಿ ನೀಡುವವರು ಪ್ರತಿ 15 ದಿನಗಳಿಗೊಮ್ಮೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಸರ್ಕಾರ ಗೈಡ್ ಲೈನ್ ನಲ್ಲಿ ತಿಳಿಸಿದೆ.