ಬೆಂಗಳೂರು: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳದ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೂ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.21.50 ರಿಂದ ಶೇ. 24.50 ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಜುಲೈ 1ರಿಂದಲೇ ಈ ಆದೇಶ ಅನ್ವಯವಾಗಲಿದೆ.
ಡಿಎ ಹೆಚ್ಚಳದಿಂದಾಗಿ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.