ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಲಾಗಿದೆ. ಜುಲೈ 1ರಿಂದ ಅನ್ವಯವಾಗುವಂತೆ ಜಾರಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂಪಾಯಿಯನ್ನು ಭರಿಸಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ತನ್ನ ನೌಕರರ ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.