alex Certify BIG NEWS: ರಾಜ್ಯ BJP ಕಾರ್ಯಕಾರಿಣಿ ಸಭೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ BJP ಕಾರ್ಯಕಾರಿಣಿ ಸಭೆಗೆ ಚಾಲನೆ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕಾರಿಣಿಗೆ ಚಾಲನೆ ನೀಡಿದರು.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ರಾಜ್ಯ ನಾಯಕರ ಪ್ರವಾಸ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಪರ್ಯಾಯ ಕಾರ್ಯಕ್ರಮಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಹಲವು ಮಹತ್ವದ ವಿಚಾರಗಳು ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿಗಳಾದ ಬಿ‌.ಎಸ್‌ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ ಶೆಟ್ಟರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...