alex Certify BIG NEWS: ರಾಮದಾಸ್ ಅವರಿಗೆ ಕಿರುಕುಳ ನೀಡುವಷ್ಟು ಶಕ್ತಿ ನನಗಿಲ್ಲ; ಗುಂಬಜ್ ವಿಚಾರದಲ್ಲಿ ನನ್ನ ಮಾತಿಗೆ ಬದ್ಧನಾಗಿದ್ದೇನೆ; ಸಂಸದ ಪ್ರತಾಪ್ ಸಿಂಹ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಮದಾಸ್ ಅವರಿಗೆ ಕಿರುಕುಳ ನೀಡುವಷ್ಟು ಶಕ್ತಿ ನನಗಿಲ್ಲ; ಗುಂಬಜ್ ವಿಚಾರದಲ್ಲಿ ನನ್ನ ಮಾತಿಗೆ ಬದ್ಧನಾಗಿದ್ದೇನೆ; ಸಂಸದ ಪ್ರತಾಪ್ ಸಿಂಹ ಟಾಂಗ್

ಸಂಸದ ಪ್ರತಾಪ್ ಸಿಂಹ ರಿಲೀಸ್..! - Power TV News

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಬಿಜೆಪಿ ಸ್ವಪಕ್ಷದ ನಾಯಕರ ನಡುವಿನ ಸಮರಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯವರಿಂದ ಬೆನ್ನು ತಟ್ಟಿಸಿಕೊಂಡಿರುವ ಶಾಸಕ ರಾಮದಾಸ್ ಅವರಿಗೆ ಕಿರುಕುಳ ನೀಡುವಷ್ಟು ಶಕ್ತಿ ನನಗಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿಚಾರ ಮುಂದಿಟ್ಟುಕೊಂಡು ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಎಸ್.ಎ.ರಾಮದಾಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ರಾಮದಾಸ್ ಯಾವ ಅರ್ಥದಲ್ಲಿ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಅವರಿಗೆ ಕಿರುಕುಳ ನೀಡುವ ಶಕ್ತಿ ನನಗಿಲ್ಲ ಎಂದರು.

ಗುಂಬಜ್ ಒಡೆದರೆ ಟಿಪ್ಪು ಅನುಯಾಯಿಗಳಿಗೆ ಕಿರುಕುಳ ಆಗುತ್ತದೆ. ಶಿವಾಜಿ ಅನುಯಾಯಿಗಳಿಗೆ ಕಿರುಕುಳ ಅನಿಸುವುದಿಲ್ಲ. ಹೀಗಿರುವಾಗ ಅವರು ಯಾವ ಅರ್ಥದಲ್ಲಿ ಹೇಳಿದ್ದು? ಮೈಸೂರು ರಾಜಕಾರಣಿಗಳ ಬಳಿ ನನ್ನನ್ನೇ ಸುಟ್ಟು ಹಾಕುವಷ್ಟು ಹಣವಿದೆ. ಅವರಿಗೆ ಕಿರುಕುಳ ನೀಡುವಷ್ಟು ಶಕ್ತಿವಂತ ನಾನಲ್ಲ. ನಾನು ರಿಯಲ್ ಎಸೇಟ್ ಮಾಡಲು ರಾಜಕಾರಣಕ್ಕೆ ಬಂದಿಲ್ಲ. ಮೈಸೂರಿನ ರಾಜಕಾರಣಿಗಳ ಜೊತೆ ಸೇರಿಕೊಂಡು ವ್ಯವಹಾರ ಮಾಡುವ ಅವಶ್ಯಕತೆ ಇಲ್ಲ. ನಾನು ಅಭಿವೃದ್ಧಿಗಾಗಿ ರಾಜಕಾರಣ ಮಾಡುತ್ತೇನೆ. ರಾತ್ರಿ ಕೆಲಸ ಮಾಡುವವರು ಕಳ್ಳರು. ರಾತ್ರಿ ಯಾಕೆ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು? ಬಸ್ ನಿಲ್ದಾಣಕ್ಕೆ ಹೆಸರಿಡಲು ಕಾನೂನಿದೆ. ರಾತ್ರೋರಾತ್ರಿ ಹೀಗೇಕೆ ಮಾಡಿದ್ದಾರೆ? ಇಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂಬುದು ಸ್ಪಷ್ಟ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಧ್ಯಪ್ರವೇಶ ಮಾಡಿದೆ. ಅನಧಿಕೃತ ಕಟ್ಟಡ ಎಂದು ಹೇಳಿದೆ. ಹಾಗಾಗಿ ಬಸ್ ನಿಲ್ದಾಣ ತೆರವು ಮಾಡಬಹುದು ಎಂದು ವಾಗ್ದಾಳಿ ನಡೆಸಿದರು.

ಇನ್ನು ಮೂಲ ವಿನ್ಯಾಸದಲ್ಲಿ ಗುಂಬಜ್ ಇಲ್ಲ. ಹೊಸ ವಿನ್ಯಾಸದಲ್ಲಿ ಗುಂಬಜ್ ಇದೆ. ಆ ನಕ್ಷೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಹಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರ ಕೊಟ್ಟ ಗಡುವು ಮುಗಿದ ಮೇಲೆ ಏನಾಗುತ್ತೇ ನೋಡೋಣ. ನಾನು ಅಂದುಕೊಂಡಿದ್ದನ್ನು ಸಾಧಿಸಿ ತೋರಿಸಿದ್ದೇನೆ. ಟಿಪ್ಪು ಎಕ್ಸ್ ಪ್ರೆಸ್ ರೈಲು ಹೆಸರು ಬದಲಾಯಿಸಿದ್ದೇನೆ. ಮಹಿಷ ದಸರಾ ನಿಲ್ಲಿಸಿದ್ದೇನೆ. ಗುಂಬಜ್ ವಿಚಾರದಲ್ಲಿಯೂ ನನ್ನ ಮಾತಿಗೆ ನಾನು ಬದ್ಧ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...