ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಈ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪ ಮಾಡುತ್ತೇವೆ. ರಾಷ್ಟ್ರಧ್ವಜಕ್ಕೆ ಅಪಮಾನವಾದರೂ ಸುಮ್ಮನೆ ಕೂರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರದ ವಿರುದ್ಧ ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಇದನ್ನೆಲ್ಲ ಮುಚ್ಚಿ ಹಾಕಲು ಮಕ್ಕಳನ್ನ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾವು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.