ನವದೆಹಲಿ; ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಎನ್ ಡಿ ಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿಯಾಗಿ ಇದೀಗ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸಿದ್ದು, ಚುನಾವಣಾಧಿಕಾರಿಯಾಗಿರುವ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿಯವರಿಗೆ ನಾಮಪತ್ರ ಹಸ್ತಾಂತರಿಸಿದರು.
ಪರಿಷ್ಕೃತ ಪಠ್ಯ ಪುಸ್ತಕ ಮಾರ್ಪಡು; ತಿದ್ದೋಲೆ ಹೊರಡಿಸಿದ ಶಿಕ್ಷಣ ಇಲಾಖೆ
ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್, ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಡಿಎಂಕೆ ಯ ಎ.ರಾಜಾ, ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.