ತುಮಕೂರು: ಮಳೆ ಅವಾಂತರದಿಂದಾಗಿ ತುಮಕೂರು ಬಳಿ ಹೆಬ್ಬಾಕ ಕೆರೆ ಕೋಡಿ ಒಡೆದು ರಾಷ್ಟ್ರೀಯ ಹೆದ್ದಾರಿ 48ಕ್ಕೆ ನುಗ್ಗಿದ್ದು, ಹೆದ್ದಾರಿ ಸಂಪೂರ್ಣ ಜಲಾವೃತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ.
ರಾಷ್ಟ್ರೀಯ ಹೆದ್ದಾರಿ ಮೇಲೆ ನದಿಯಂತೆ ನೀರು ಉಕ್ಕಿ ಹರಿಯುತ್ತಿದ್ದು, ಬೆಂಗಳೂರು-ಪುಣೆ ಮಾರ್ಗ ಸಂಪರ್ಕ ಕಡಿತಗೊಂಡಿದೆ. ತುಮಕೂರು-ಬೆಂಗಳೂರು ಮಾರ್ಗದಲ್ಲಿ 10 ಕೀ.ಮೀವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಬೇರೆ ಮಾರ್ಗದಲ್ಲಿ ಹೋಗಲೂ ಸಾಧ್ಯವಾಗದೇ ವಾಹನ ಸವಾರರು, ಪ್ರಯಾಣಿಕರು ಪರದಾಡುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48 ಬೆಂಗಳೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಬಹುತೇಕ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಅಲ್ಲದೇ ಬೆಳಗಾವಿ-ಪುಣೆ ಮಾರ್ಗವಾಗಿ ಉತ್ತರ ಭಾರತದೆಡೆಗೆ ತೆರಳುವ ವಾಹನಗಳು ಕೂಡ ಇದೇ ಮಾರ್ಗದಿಂದ ಸಂಚರಿಸುತ್ತವೆ. ಇದೀಗ ರಸ್ತೆ ಜಲಾವೃತಗೊಂಡಿದ್ದರಿಂದ ಸಂಪೂರ್ಣ ಟ್ರಾಫಿಕ್ ಜಾಮ್ ನಿಂದ ಜನರು ಪರದಾಡುವಂತಾಗಿದೆ.