ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಯೋಜನೆ ರೂಪಿಸಿದೆ ಎಂಬ ಮಾತು ಕೇಳಿಬರುತ್ತಿದೆ.
BIG NEWS: ನೈತಿಕ ಪೊಲೀಸ್ ಗಿರಿ ಪ್ರಕರಣ; ಪೊಲೀಸರು ಅಧಿಕಾರವನ್ನು ಬಿಜೆಪಿಗೆ ಕೊಟ್ಟುಬಿಟ್ಟಿದ್ದಾರೆ; ಡಿ.ಕೆ.ಶಿ. ವಾಗ್ದಾಳಿ
2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಂಘಟನೆ ನಿಟ್ಟಿನಲ್ಲಿ ಹಲವು ರಾಜ್ಯಗಳ ಪ್ರಬಲ ನಾಯಕರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆದುಕೊಳ್ಳುವ ನಿಟ್ಟಿನಲ್ಲಿ ಹೈಕಮಾಂಡ್ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕರ್ನಾಟಕದಿಂದ ಸಿದ್ದರಾಮಯ್ಯ ಅವರನ್ನು ದೆಹಲಿ ರಾಜಕೀಯಕ್ಕೆ ಕರೆಸಿಕೊಳ್ಳಲು ಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 13ರಂದು ‘ಪುಷ್ಪ’ ಸಿನಿಮಾದ ಎರಡನೇ ಹಾಡು ರಿಲೀಸ್
ಇಂದು ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆ ನಡೆಯಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗುತ್ತಿರುವುದು ಈ ಚರ್ಚೆಗೆ ಇನ್ನಷ್ಟು ಪುಷ್ಠಿ ನೀಡಿದಂತಿದೆ.
ಆದರೆ ಈ ಬಗ್ಗೆ ನಿರಾಕರಿಸಿರುವ ಸಿದ್ದರಾಮಯ್ಯ, ತಮಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಆಸಕ್ತಿಯಲ್ಲ. ನಮ್ಮದೇನಿದ್ದರೂ ರಾಜ್ಯ ರಾಜಕಾರಣ. ಸೋನಿಯಾ ಗಾಂಧಿ ಭೇಟಿ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.